ಬೀದರ್‌ನ ಜಾನುವಾರು ಸಂಶೋಧನೆ ಮತ್ತು ಮಾಹಿತಿ ಕೇಂದ್ರವು 2024ನೇ ಸಾಲಿನ ರಾಷ್ಟ್ರಮಟ್ಟದ ಜಾನುವಾರು ತಳಿ ಸಂರಕ್ಷಣೆ ಪ್ರಶಸ್ತಿಯನ್ನು ದೇವಣಿ ತಳಿ ಸಂರಕ್ಷಣೆಗಾಗಿ ಪಡೆದುಕೊಂಡಿದೆ. ಹರಿಯಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಬಿ.ವಿ. ಶಿವಪ್ರಕಾಶ್ ಮತ್ತು ಡಾ. ಪ್ರಕಾಶ್ ಕುಮಾರ ರಾಠೋಡ ಪ್ರಶಸ್ತಿ ಸ್ವೀಕರಿಸಿದರು. ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿಗಳು ಈ ಸಾಧನೆಯನ್ನು ಅಭಿನಂದಿಸಿದ್ದಾರೆ.