ಕರ್ನಾಟಕ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಸಚಿವರು, ಶಾಸಕರು ಮತ್ತು ಅವರ ಪುತ್ರರನ್ನು ಗುರಿಯಾಗಿಸಿ ಹನಿಟ್ರ್ಯಾಪ್ ನಡೆಸುವ ಪ್ರಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ನ್ಯಾಯಾಧೀಶರ ಮೇಲೂ ಇಂತಹ ಪ್ರಯತ್ನ ನಡೆದಿದೆ ಎಂಬ ವದಂತಿಗಳಿವೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜಕೀಯ ದ್ವೇಷದಿಂದ ಈ ಹನಿಟ್ರ್ಯಾಪ್ ನಡೆದಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.