ಸಮೀಪದಲ್ಲೇ ಪೆಟ್ರೋಲ್ ಬಂಕೊಂದು ಇರೋದ್ರಿಂದ ಬಾವಿಯಿಂದ ಪೆಟ್ರೋಲ್ ಮಿಶ್ರಿತ ನೀರು ಬರುತ್ತಿದೆ ಎನ್ನಲಾಗುತ್ತಿದೆ. ಒಮ್ಮೆ ಬಿಬಿಎಂಪಿಯವರು ಸ್ಥಳಕ್ಕೆ ಭೇಟಿ ನೀಡಿ ನೀರಿನ ಸ್ಯಾಂಪಲ್ ಸಂಗ್ರಹಿಸಿ ನೀರು ಕುಡಿಯಲು ಯೋಗ್ಯವಲ್ಲ ಅಂತ ಹೇಳಿದ್ದನ್ನು ಬಿಟ್ಟರೆ ಬೇರೇನೂ ಕೆಲಸವಾಗಿಲ್ಲ. ಸುಮಾರು ಒಂದು ವರ್ಷದಿಂದ ನೂರಕ್ಕೂ ಹೆಚ್ಚು ಕುಟುಂಬಗಳು ತೊಂದರೆ ಅನುಭವಿಸುತ್ತಿದ್ದು ದುಬಾರಿ ಬೆಲೆ ತೆತ್ತು ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳುತ್ತಿದ್ದಾರೆ.