ಈ ಅದ್ಭುತ ಅರ್ಧಶತಕದ ಮೂಲಕ ಪಂತ್ 50 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ವಾಸ್ತವವಾಗಿ 1975 ರಲ್ಲಿ, ವೆಸ್ಟ್ ಇಂಡೀಸ್‌ನ ರಾ ಫ್ರೆಡೆರಿಕ್ಸ್ ಆಸ್ಟ್ರೇಲಿಯನ್ ನೆಲದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದರು. ಫ್ರೆಡೆರಿಕ್ಸ್ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದೀಗ 29 ಎಸೆತಗಳಲ್ಲಿ ಈ ಸಾಧನೆ ಮಾಡಿರುವ ರಿಷಬ್ ಪಂತ್ ಆಸ್ಟ್ರೇಲಿಯಾ ನೆಲದಲ್ಲಿ ಅತಿವೇಗದ ಅರ್ಧಶತಕ ಸಿಡಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.