ಭಾರೀ ಮಳೆಯಿಂದ ಉಜ್ಜಯಿನಿ ಮಹಾಕಾಳ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಭಾರೀ ಮಳೆಯಿಂದಾಗಿ ಉಜ್ಜಯಿನಿಯ ಮಹಾಕಾಳ ದೇವಾಲಯದ ಹೊರಬದಿಯ ಗೋಡೆ ಕುಸಿದಿದ್ದು, ಹಲವರು ಸಿಲುಕಿರುವ ಆತಂಕವಿದೆ. ಅವಶೇಷಗಳ ಅಡಿಯಲ್ಲಿರುವ ವ್ಯಕ್ತಿಗಳ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.