ಕೇರಳದ ಮುನ್ನಾರ್​ನಲ್ಲಿ ಬಸ್ ಪಲ್ಟಿಯಾಗಿ, ಮೂವರು ಕಾಲೇಜು ವಿದ್ಯಾರ್ಥಿಗಳು ಸಾವು

ಕೇರಳದ ಮುನ್ನಾರ್​ನಲ್ಲಿ ಬಸ್ ಪಲ್ಟಿಯಾದ ಪರಿಣಾಮ ಮೂವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರು ತಮಿಳುನಾಡಿನವರು . ಪ್ರಸಿದ್ಧ ಪ್ರವಾಸಿ ತಾಣವಾದ ಎಕೋ ಪಾಯಿಂಟ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ವೆನಿಕಾ ಆರ್, ಅತಿಕಾ ಆರ್ ಮತ್ತು ಸುಧನ್ ಎಂದು ಗುರುತಿಸಲಾಗಿದ್ದು, ತಮಿಳುನಾಡಿನ ನಾಗರ್‌ಕೋಯಿಲ್‌ನಲ್ಲಿರುವ ಸ್ಕಾಟ್ ಕ್ರಿಶ್ಚಿಯನ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.