2024 ರ ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿದಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ತೆರಳಿದ್ದ ಭಾರತದ ಭಾಗಶಃ ಸ್ಪರ್ಧಿಗಳು ದೇಶಕ್ಕೆ ಮರಳಿದ್ದಾರೆ. ಕ್ರೀಡಾಕೂಟದುದ್ದಕ್ಕೂ ತಮ್ಮ ಮಾತುಗಳಿಂದ ದೇಶದ ಸ್ಪರ್ಧಿಗಳ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಒಲಿಂಪಿಕ್ಸ್ ಸ್ಪರ್ಧಿಗಳನ್ನು ದೆಹಲಿಯ ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದಾರೆ.