ನಟ ರಕ್ಷಿತ್ ಶೆಟ್ಟಿ ಅವರು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾವನ್ನು ಬಿಡುಗಡೆ ಮಾಡುತ್ತಿದ್ದಾರೆ. ಜುಲೈ 21ರಂದು ಈ ಚಿತ್ರ ರಿಲೀಸ್ ಆಗಲಿದೆ. ಹೊಸ ಕಲಾವಿದರ ಜೊತೆಗೆ ರಮ್ಯಾ, ದಿಗಂತ್ ಮಂಚಾಲೆ, ಪವನ್ ಕುಮಾರ್, ರಿಷಬ್ ಶೆಟ್ಟಿ ಅವರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿತಿನ್ ಕೃಷ್ಣಮೂರ್ತಿ ಆ್ಯಕ್ಷನ್-ಕಟ್ ಹೇಳಿದ್ದಾರೆ.