ಹುಬ್ಬಳ್ಳಿಯ ವೀರಾಪುರ ಬಡಾವಣೆಯಲ್ಲಿರುವ ಅಂಜಲಿ ನಿವಾಸಕ್ಕೆ ಇಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಭೇಟಿ ನೀಡಿದರು. ಈ ವೇಳೆ ಅಂಜಲಿ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಅಜ್ಜಿ ಗಂಗಮ್ಮ ಹಾಗೂ ಸಹೋದರಿಯರು ಮನವಿ ಮಾಡಿದ್ದು, ಆರ್.ಹಿತೇಂದ್ರ ಕಾಲಿಗೆ ಬಿದ್ದು ಪೋಷಕರು ಕಣ್ಣೀರು ಹಾಕಿದ್ದಾರೆ. ಆರೋಪಿ ಗಿರೀಶ್‌ಗೆ ಗಲ್ಲು ಶಿಕ್ಷೆಯಾಗಬೇಕು ಎಂದಿದ್ದಾರೆ.