ಪ್ರಧಾನಿ ನರೇಂದ್ರ ಮೋದಿ ಹಾಗೂ ತಮ್ಮ ವಿರುದ್ಧ ನಿತಂತರವಾಗಿ ಟೀಕಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ಕೊಟ್ಟಿರುವ ವಿಡಿಯೋ ವೈರಲ್ ಆಗುತ್ತಿದೆ. ಮೋದಿ ಅವರಿಗೆ ಯಾಕೆ ಬೈಯುತ್ತಿದ್ದೀಯಾ ಎಂದು ಕೇಳಿದಾಗ, ಸಚಿವ ಸ್ಥಾನ ಉಳಿಸಿಕೊಳ್ಳಲು ಬೈಯುತ್ತಿದ್ದೇವೆ ಎಂದು ಸಂತೋಷ್ ಲಾಡ್ ಹೇಳಿದ್ದಾಗಿ ಜೋಶಿ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು.