ವಶಪಡಿಸಿಕೊಂಡ ಪಟಾಕಿ ದಾಸ್ತಾನಿನೊಂದಿಗೆ ಪೊಲೀಸರು

ಸಿಂಧನೂರು ತಾಲ್ಲೂಕಿನ ಗುಂಜಳ್ಳಿ ಎಂಬಲ್ಲಿ ತುರ್ವಿಹಾಳ್ ಪೊಲೀಸ್ ಠಾಣೆಯ ಸಿಬ್ಬಂದಿ ದಾಳಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ದಾಸ್ತಾನು ವಶಪಡಿಸಿಕೊಂಡಿದ್ದಾರೆ. ಟಿವಿ9 ಕನ್ನಡ ವಾಹಿನಿಯ ರಾಯಚೂರು ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಬೇರೆ ಕೆಲ ಭಾಗಗಳಲ್ಲೂ ದಾಳಿ ನಡೆಸಿರುವ ಪೊಲೀಸರು ಒಟ್ಟು 24 ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.