‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಎರಡನೇ ಭಾಗ ನವೆಂಬರ್ 17ರಂದು ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ ಪರಭಾಷೆಗಳಿಗೂ ಡಬ್ ಆಗಿ ಏಕಕಾಲಕ್ಕೆ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಸಿನಿಮಾ ಬಗ್ಗೆ ಮಾಹಿತಿ ನೀಡಲು ತಂಡ ಸುದ್ದಿಗೋಷ್ಠಿ ಕರೆದಿತ್ತು. ಟ್ರೇಲರ್ ನೋಡಿದ ಅನೇಕರಿಗೆ ಇದು ರಿವೇಂಜ್ ಕಥೆ ಎನಿಸಿದೆ. ಆದರೆ, ಸೇಡು ಮಾತ್ರ ಇಲ್ಲ ಎನ್ನುತ್ತಾರೆ ನಿರ್ದೇಶಕ ಹೇಮಂತ್ ರಾವ್. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದಾರೆ.