ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಪ್ರಸ್ತುತ ನಡೆಯುತ್ತಿರುವ ದುಲೀಪ್ ಟ್ರೋಫಿಯಲ್ಲಿ ಕೇವಲ 34 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಭಾರತ-ಬಿ ಪರ ಆಡುತ್ತಿರುವ ಪಂತ್, ಪಂದ್ಯದ ಮೂರನೇ ದಿನದಂದು ಬಿರುಗಾಳಿಯ ಇನ್ನಿಂಗ್ಸ್ ಆಡಿ, ತಮ್ಮ ತಂಡದ ಮುನ್ನಡೆಯನ್ನು 200 ರನ್‌ಗಳ ಆಚೆಗೆ ತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದರು.