ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಅದ್ಧೂರಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರ ರೋಡ್ ಶೋನಲ್ಲಿ ಭಾಗವಹಿಸಲು ಜನರು ಬೀದಿಗಳಲ್ಲಿ ಜಮಾಯಿಸಿದರು. ಎಲ್ಲೆಲ್ಲೂ ಮೋದಿ, ಮೋದಿ ಎಂಬ ಘೋಷಣೆಗಳು ಮೊಳಗಿದವು. ಮೆರವಣಿಗೆ ನಂತರ ಪ್ರಧಾನಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಮತಾ ಬ್ಯಾನರ್ಜಿ ಸಿಎಂ ಆಗಿರುವ ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಹೆಚ್ಚುತ್ತಿದೆ.