ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡಿದ ಮಲ್ಲಿಕಾರ್ಜುನ್​ ಖರ್ಗೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಿದ್ದನ್ನು ಉಲ್ಲೇಖಿಸಿ, ಮುಂದಿನ ಎಂಟು ದಿನಗಳಲ್ಲಿ ಇತರ ರಾಜ್ಯಗಳಲ್ಲೂ ಅಧ್ಯಕ್ಷರ ಬದಲಾವಣೆ ಆಗುವ ಸಾಧ್ಯತೆಯಿದೆ ಎಂದು ಸುಳಿವು ನೀಡಿದ್ದಾರೆ. ಇದರಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದೆ.