ಕರ್ನಾಟಕ ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. ಹಾಲು ಉತ್ಪಾದಕರ ಮತ್ತು ಒಕ್ಕೂಟಗಳ ಬೇಡಿಕೆಯನ್ನು ಮುಖ್ಯಮಂತ್ರಿಗಳ ಮುಂದಿಡಲಾಗಿದೆ. ಹಾಲಿನ ದರ ಎಷ್ಟು ಏರಿಕೆಯಾಗಬೇಕು ಎಂಬುದನ್ನು ಸಿಎಂ ನಿರ್ಧರಿಸಲಿದ್ದಾರೆ ಎಂದಿದ್ದಾರೆ.