ಆ. 27 ರಂದು ರಾಜ್ಯದ 11 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಚಾಲನೆ

ಗೃಹ ಲಕ್ಷ್ಮಿ ಯೋಜನೆಯಲ್ಲಿ ನೋಂದಣಿಯಾಗಿರುವ 1.05 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ. ಬೆಳಗಾವಿಯಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ಗ್ರಾಮ ಪಂಚಾಯತಿಯಲ್ಲಿ ನೇರಪ್ರಸಾರವಾಗಲಿದೆ. ಪ್ರತಿ ಪಂಚಾಯಿತಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ವಾರ್ಡಿನಲ್ಲಿ ಸಂಭ್ರಮದಿಂದ ಆಚರಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಜೂಮ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ವ್ಯವಸ್ಥೆ ಮಾಡಲಾಗಿದೆ.