ನಟ ಶಿವರಾಜ್ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಅದಕ್ಕಾಗಿ ಅವರು ಚಿಕಿತ್ಸೆ ಪಡೆಯಲು ಆರಂಭಿಸಿದ್ದಾರೆ. ಒಂದು ಸರ್ಜರಿ ಕೂಡ ಆಗಬೇಕಿದೆ. ಅದರ ನಡುವೆಯೂ ಶಿವರಾಜ್ಕುಮಾರ್ ಅವರು ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಫೋನ್ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಿದ್ದಾರೆ ಶಿವಣ್ಣ.