ಕೆಲವೇ ದಿನಗಳಲ್ಲಿ ರಿಷಬ್ ಶೆಟ್ಟಿಯವರ ಹುಟ್ಟುಹಬ್ಬವಿದೆ. ಇಷ್ಟು ದಿನ ಕುಟುಂಬದೊಟ್ಟಿಗೆ, ಆಪ್ತ ಗೆಳೆಯರು ಕೆಲವು ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ರಿಷಬ್ ಶೆಟ್ಟಿ ಈ ಬಾರಿ ಬೃಹತ್ ಆಗಿ ಭಾರಿ ಸಂಖ್ಯೆಯ ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಜ್ಜಾಗಿದ್ದಾರೆ. ಹುಟ್ಟುಹಬ್ಬದ ನೆವದ ಮೂಲಕ ತಮ್ಮ ಅಭಿಮಾನಿಗಳನ್ನು ಭೇಟಿ ಆಗಲು ರಿಷಬ್ ಶೆಟ್ಟಿ ಮುಂದಾಗಿದ್ದಾರೆ. ಅದಕ್ಕಾಗಿ ಅವರೇ ಸ್ಥಳ, ಸಮಯವನ್ನು ನಿಗದಿಪಡಿಸಿದ್ದಾರೆ.