ನೇಪಾಳಕ್ಕೆ ವಾಪಸ್ ಹೊರಟು ನಿಂತ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ

ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯ ಹಾಸ್ಟೆಲ್‌ನಲ್ಲಿ ನೇಪಾಳಿ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಳಿಕ ಆತಂಕಗೊಂಡಿರುವ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ದೇಶಕ್ಕೆ ಮರಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಸದಸ್ಯರು ಭಾರತದಲ್ಲಿ ನೀವು ಸುರಕ್ಷಿತವಾಗಿರುತ್ತೀರಿ ಎಂದು ಹೇಳುತ್ತಾ ಮನವೊಲಿಸುವ ಕೆಲಸ ಮಾಡುತ್ತಿದೆ.