ಸಿಎಂ, ಡಿಸಿಎಂ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ರಾಯಚೂರಿಗೆ ಆಗಮಿಸುತ್ತಿರುವುದರಿಂದ ಭದ್ರತೆ ದೃಷ್ಟಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ರಾಯಚೂರು ಮತ್ತು ಯರಗೇರಾದಲ್ಲಿ ಮಾಡಲಾಗುತ್ತಿದೆ. ಪೊಲೀಸ್ ಅಧಿಕಾರಿಯೊಬ್ಬರು, ನಿಯೋಜನೆಗೊಂಡಿರುವ ಪೊಲೀಸರಿಗೆ ಕಾರ್ಯಕ್ರಮದ ವಿವರಣೆ ಮತ್ತು ಇವತ್ತಿನ ಜವಾಬ್ದಾರಿಗಳನ್ನು ವಿವರಿಸುತ್ತಿದ್ದಾರೆ.