ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ಅಪರಿಚಿತ ವ್ಯಕ್ತಿ ಹಿಂದಿನಿಂದ ಬಂದು ಯುವತಿಯ ಖಾಸಗಿ ಅಂಗವನ್ನು ಸ್ಪರ್ಶಿಸಿದ್ದಾನೆ. ಸ್ಥಳೀಯ ನಿವಾಸಿ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಸಂಗ್ರಹಿಸಲಾಗುತ್ತಿದೆ. ಪ್ರದೇಶದ ನಿವಾಸಿಗಳು ಹೆಚ್ಚಿನ ಪೊಲೀಸ್ ಗಸ್ತು ಏರ್ಪಾಡು ಮಾಡುವಂತೆ ಒತ್ತಾಯಿಸಿದ್ದಾರೆ.