ಪೂಜೆ ಸಲ್ಲಿಸುತ್ತಿರುವ ಈಶ್ವರಪ್ಪ ಕುಟುಂಬ

ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಮಗ ಕಾಂತೇಶ್ ಗೆ ಟಿಕೆಟ್ ನೀಡದಿರುವ ಕಾರಣ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಈಶ್ವರಪ್ಪ ಖುದ್ದು ತಾವೇ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಬಿಜೆಪಿಯ ಬಿವೈ ರಾಘವೇಂದ್ರ ಮತ್ತು ಕಾಂಗ್ರೆಸ್ ನ ಗೀತಾ ಶಿವರಾಜಕುಮಾರ್ ಈಶ್ವರಪ್ಪನವರ ಎದುರಾಳಿಯಾಗಿದ್ದಾರೆ.