ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ ಅನ್ನೋ ಘೋಷವಾಕ್ಯವನ್ನು ಬದಲಾಯಿಸಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಅಂತ ಹಲವು ಜಿಲ್ಲೆಗಳ ವಸತಿ ಶಾಲೆಗಳಲ್ಲಿ ಬರೆಸಲಾಗಿತ್ತು. ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೆ ಈಗ ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಕಿರುಚಿತ್ರದ ವಿಡಿಯೋ ಬಿಡುಗಡೆ ಮಾಡಲಾಗಿದೆ. ಪ್ರಶ್ನಿಸುವುದನ್ನು ಕಲಿಯಬೇಕು ಎಂಬ ಅರ್ಥದ ಕಿರುಚಿತ್ರದಲ್ಲಿ ಶಿಕ್ಷಕರ ಪಾತ್ರದಲ್ಲಿ H.C.ಮಹದೇವಪ್ಪ ಅಭಿನಯಿಸಿದ್ದಾರೆ.