ಕನ್ನಡದಲ್ಲಿ ಸಿನಿಮಾ ನಿರ್ದೇಶನ ಮಾಡಲು ರೂಪೇಶ್ ಶೆಟ್ಟಿ ಪ್ಲ್ಯಾನ್; ಇಲ್ಲಿದೆ ವಿವರ

ರೂಪೇಶ್ ಶೆಟ್ಟಿ ಅವರದ್ದು ಬಹುಮುಖ ಪ್ರತಿಭೆ. ನಿರೂಪಕನಾಗಿ, ಆರ್ಜೆ ಆಗಿ, ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ತುಳು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ತುಳು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಇತ್ತೀಚೆಗೆ ಅವರು ನಟಿಸಿ ನಿರ್ದೇಶಿಸಿದ ‘ಸರ್ಕಸ್’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿದೆ. ಕನ್ನಡದಲ್ಲಿ ಅವರ ನಿರ್ದೇಶನ ಯಾವಾಗ ಎನ್ನುವ ಪ್ರಶ್ನೆ ಮೂಡಿದೆ. ‘ನಾನು ಕನ್ನಡ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದೇನೆ. ಇದಕ್ಕೆ ಬೇರೆಯವರು ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡದಲ್ಲಿ ನಿರ್ದೇಶನ ಮಾಡಲು ಒಂದು ಸ್ಕ್ರಿಪ್ಟ್ ರೆಡಿ ಮಾಡಿಕೊಂಡಿದ್ದೇವೆ. ಇದಕ್ಕೆ ಸ್ವಲ್ಪ ಸಮಯ ಬೇಕು’ ಎಂದಿದ್ದಾರೆ ಅವರು.