‘ನನ್ನನ್ನು ದರಿದ್ರ ಎಂದರು’; ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ ನಮ್ರತಾ ಗೌಡ

ಪ್ರತಿ ಬಾರಿ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭ ಆದಾಗ ಸ್ಪರ್ಧಿಗಳಿಗೆ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆ ಬಗ್ಗೆ ಹೇಳಿಕೊಳ್ಳಲು ಒಂದು ಅವಕಾಶ ನೀಡಲಾಗುತ್ತದೆ. ಈ ಮೂಲಕ ಮನಸ್ಸು ಹಗುರ ಮಾಡಿಕೊಳ್ಳಬಹುದು. ನಮ್ರತಾ ಗೌಡಗೆ ಕುಟುಂಬದವರಿಂದಲೇ ಹಿನ್ನಡೆ ಆಯಿತು. ಹೆಣ್ಣು ಮಗು ಎಂಬ ಕಾರಣಕ್ಕೆ ಅವರನ್ನು ಹೊರಗಿಟ್ಟರು. ಕಾರ್ತಿಕ್ಗೆ ತಂದೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು, ಡ್ರೋನ್ ಪ್ರತಾಪ್ ಅವರಿಂದ ಕುಟುಂಬದವರು ತೊಂದರೆಗೆ ಸಿಲುಕಿದರು. ಈ ಎಲ್ಲಾ ವಿಚಾರಗಳ ಬಗ್ಗೆ ಹೇಳಿಕೊಂಡು ಬಿಗ್ ಬಾಸ್ ಮಂದಿ ಕಣ್ಣೀರು ಹಾಕಿದ್ದಾರೆ. ಆ ವಿಡಿಯೋ ಇಲ್ಲಿದೆ.