ಸುಡಾನ್​ನಲ್ಲಿ ಸೇನಾ ವಿಮಾನ ಪತನ, 46 ಮಂದಿ ಸಾವು

ಸುಡಾನ್ ರಾಜಧಾನಿ ಖಾರ್ಟೌಮ್ ಹೊರವಲಯದಲ್ಲಿ ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಿಂದ ಹಾರುವಾಗ ವಿಮಾನ ಪತನಗೊಂಡು, ಸೇನಾ ಸಿಬ್ಬಂದಿ ಮತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಅಪಘಾತದಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ.