ಬೆಂಗಳೂರಿನಲ್ಲಿ ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಅಭಿಮಾನಿಗಳು ಸಾವನ್ನಪ್ಪಿದ ಘಟನೆಯ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ರಾಜೀನಾಮೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದ ನೈತಿಕ ಹೊಣೆಗಾರಿಕೆಯನ್ನು ಪ್ರಶ್ನಿಸಿದ್ದಾರೆ ಮತ್ತು ಡಿಕೆಶಿ ಅವರ ನಡವಳಿಕೆಯನ್ನು ಖಂಡಿಸಿದ್ದಾರೆ.