ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ 4ನೇ ಪ್ಲಾಟ್ಫಾರ್ಮ್ನಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ. ವಾರಸುದಾರರಿಲ್ಲದ ಬ್ಯಾಗ್ವೊಂದರಲ್ಲಿ 4 ಕೆಜಿ ಗಾಂಜಾ ಪತ್ತೆಯಾಗಿದ್ದು, ಅಬಕಾರಿ ಉಪನಿರೀಕ್ಷಕ ಐ.ಡಿ.ಕಿತ್ತೂರು ಗಾಂಜಾ ಜಪ್ತಿ ಮಾಡಿದ್ದಾರೆ. ರೈಲಿನ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ವ್ಯಕ್ತವಾಗಿದೆ.