ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು 10 ಅಡಿ ಮೇಲೆ ಹಾರಿದ ಕುದುರೆ ಗಾಡಿ

ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕುದುರೆ ಟಾಂಗಾಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ದೆಹಲಿ-ಸಹಾರನ್‌ಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕುದುರೆಯು ಮೇಲಕ್ಕೆ ಹಾರಿ ಕೆಳಗೆ ಬಿದ್ದಿದೆ. ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಾರು ಕುದುರೆ ಗಾಡಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದ ಕ್ಷಣ ದಾಖಲಾಗಿದೆ.