ಸುಳ್ಳಿನ ಆಡಳಿತದ ಅಂತ್ಯ; ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ ಸಂತಸ

ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಸೋಲಿಸಿ ಬಿಜೆಪಿ ಭರ್ಜರಿ ಪುನರಾಗಮನಕ್ಕೆ ಸಜ್ಜಾಗಿದೆ. ಈ ಬೃಹತ್ ಜನಾದೇಶಕ್ಕಾಗಿ ದೆಹಲಿಯ ಜನರಿಗೆ ಕೃತಜ್ಞತೆ ಸಲ್ಲಿಸಿದ ಅಮಿತ್ ಶಾ, ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ದೆಹಲಿಯನ್ನು ವಿಶ್ವದ ನಂಬರ್ ಒನ್ ರಾಜಧಾನಿಯನ್ನಾಗಿ ಮಾಡುತ್ತದೆ ಎಂದು ಭರವಸೆ ನೀಡಿದರು.