ವಿಡಿಯೋ ನೋಡೋ ಧೈರ್ಯ ಬರಲಿಲ್ಲ, ನಿಖಿಲ್ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಪ್ರಕರಣ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನನಗೂ ನೋವಾಗಿದೆ. ಆ ವಿಡಿಯೋವನ್ನು ನೋಡುವುದಕ್ಕೆ ನಾನು ಧೈರ್ಯ ಮಾಡಿಲ್ಲ. ನನ್ನ ಆಪ್ತ ವರ್ಗದವರು ಹೇಳಿದ ಪ್ರಕಾರ ಆ ವಿಡಿಯೋಗಳನ್ನು ಕನಿಷ್ಟ ಪಕ್ಷ ಬ್ಲರ್ ಕೂಡ ಮಾಡಿಲ್ಲ. ಆದರೆ ಪಾಪ ಆ ಹೆಣ್ಣು ಮಕ್ಕಳನ್ನ ಓಪನ್ ಆಗಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.