ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು

ರಸ್ತೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗುವಿನ ಮೇಲೆ ಕಾರು ಹರಿದಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. 15 ವರ್ಷದ ಬಾಲಕನೊಬ್ಬ ಕಾರು ಚಲಾಯಿಸಿ ಮಗುವಿನ ಪ್ರಾಣ ತೆಗೆದಿದ್ದಾನೆ. ದೆಹಲಿಯ ಪಹರ್‌ಗಂಜ್‌ನಲ್ಲಿ ಘಟನೆ ನಡೆದಿದೆ. ಮೊದಲು ಕಾರು ಬಂದು ನಿಂತಿತ್ತು, ಬಳಿಕ ನಿಧಾನವಾಗಿ ಮಗುವಿನ ಮೇಲೆ ಹರಿದಿದೆ. ಈ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕಾಗಮಿಸಿದ ಜನರು ಸ್ಥಳಕ್ಕೆ ಧಾವಿಸಿ ಮಗುವನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ದರು, ಆದರೆ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.