ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ

ತವರು ನೆಲದಲ್ಲಿ ಟೆಸ್ಟ್ ಪಂದ್ಯವನ್ನಾಡುತ್ತಿರುವ ಕನ್ನಡಿಗ ಕೆಎಲ್ ರಾಹುಲ್​ಗೆ ಮೊದಲ ಇನ್ನಿಂಗ್ಸ್​ನಲ್ಲಿ ಖಾತೆಯನ್ನು ತೆರೆಯಲಾಗಿಲ್ಲ. ಬ್ಯಾಟಿಂಗ್‌ ಹೋಗಲಿ, ಫೀಲ್ಡಿಂಗ್​ನಲ್ಲಾದರೂ ತಂಡಕ್ಕೆ ನೆರವಾಗಬೇಕಿದ್ದ ರಾಹುಲ್, ಕೈಗೆ ಬಂದ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿ ನಾಯಕನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.