ಬಿಗಿ ಪೊಲೀಸ್ ಬಂದೋಬಸ್ತ್ನೊಂದಿಗೆ ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಶೋಭಾಯಾತ್ರೆ ಸಾಗುತ್ತಿದೆ. ಶೋಭಾಯಾತ್ರೆಯಲ್ಲಿ ಪಾಲ್ಗೊಂಡವರ ದಾಹ ತಣಿಸಲು ರಸ್ತೆಗಳಲ್ಲಿ ನೀರು ಮತ್ತು ಶರಬತ್ತುಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ವರದಿಯಾಗಿರುವಂತೆ ಶ್ರೀರಾಮಾಂಜನೇಯ ಮಹೋತ್ಸವ ಸಮಿತಿ, ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ, ದುರ್ಗಾವಾಹಿನಿ ಸಂಘಟನೆಗಳು ಶೋಭಾಯಾತ್ರೆಯನ್ನು ಆಯೋಜಿಸಿವೆ.