ಶಂಕರ ಪಾಟೀಲ್​ ಮುನೇನಕೊಪ್ಪ ಬಿಜೆಪಿ ಬಿಟ್ಟು ಹೋಗುವುದಿಲ್ಲ

ಮಾಜಿ ಸಚಿವ ಶಂಕರ ಪಾಟೀಲ್​ ಮುನೇನಕೊಪ್ಪ ಅವರು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವರು, "ನನಗಿರುವ ಮಾಹಿತಿ ಪ್ರಕಾರ ಶಂಕರಪಾಟೀಲ್ ಮುನೇನಕೊಪ್ಪ ಅವರು ಬಿಜೆಪಿ ಪಕ್ಷ ಬಿಟ್ಟು ಹೋಗಲ್ಲ, ಅಧಿಕಾರಕ್ಕಾಗಿ ಕೆಲವರು ಹೋಗುತ್ತಾರೆ, ಇದು ದೌರ್ಭಾಗ್ಯ. ಯಾರು ಪಕ್ಷ ನಿಷ್ಠೆಯಿಂದ ಇರುತ್ತಾರೋ ಅಂತವರಿಗೆ ಬಿಜೆಪಿ ಅವಕಾಶ ಕೊಟ್ಟಿದೆ. ನಾನು ಶಂಕರ ಪಾಟೀಲ್ ಮುನೇನಕೊಪ್ಪ ಜೊತೆ ಮಾತನಾಡಿದ್ದೇನೆ. ನನಗಿರೋ‌ ಮಾಹಿತಿ ಪ್ರಕಾರ ಪಕ್ಷ ಬಿಟ್ಟು ಹೋಗಲ್ಲ ಎಂದರು.