ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್​; ಕಿಚ್ಚನ ನೋಡಲು ಮುಗಿಬಿದ್ದ ಅಭಿಮಾನಿಗಳು

ನಟ ಕಿಚ್ಚ ಸುದೀಪ್​ ಅವರು ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನ ಮಾಡಿದ್ದಾರೆ. ಪತ್ನಿ ಪ್ರಿಯಾ ಕೂಡ ಅವರಿಗೆ ಸಾಥ್​ ನೀಡಿದ್ದಾರೆ. ಸುದೀಪ್ ಬಂದಿರುವ ವಿಷಯ ತಿಳಿದು, ದೇವಸ್ಥಾನದ ಆವರಣದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ‘ಬಾಸ್​ ಬಾಸ್​ ಕಿಚ್ಚ ಬಾಸ್​..’ ಎಂದು ಜೈಕಾರ ಕೂಗುವ ಮೂಲಕ ಜನರು ಅಭಿಮಾನ ಪ್ರದರ್ಶಿಸಿದ್ದಾರೆ. ಕಿಚ್ಚ ಸುದೀಪ್ ಅವರು ಅಭಿಮಾನಿಗಳ ಕಡೆಗೆ ಕೈ ಬೀಸಿ ಮುಂದೆ ಸಾಗಿದ್ದಾರೆ. ಕೆಲವೇ ದಿನಗಳ ಹಿಂದೆ ‘ಮ್ಯಾಕ್ಸ್​’ ಸಿನಿಮಾದ ಚಿತ್ರೀಕರಣವನ್ನು ಸುದೀಪ್​ ಮುಗಿಸಿದ್ದಾರೆ. ಈ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಸಖತ್​ ಭರವಸೆ ಇದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ. ಹಲವು ತಿಂಗಳ ಕಾಲ ಚಿತ್ರೀಕರಣ ನಡೆದಿದ್ದು, ಇತ್ತೀಚೆಗೆ ಮುಕ್ತಾಯ ಆಗಿದೆ. ಆ ಸುದ್ದಿ ತಿಳಿಸಲು ಸುದೀಪ್​ ಅವರು ಒಂದು ವಿಡಿಯೋ ಹಂಚಿಕೊಂಡಿದ್ದರು. 2022ರಲ್ಲಿ ತೆರೆಕಂಡ ‘ವಿಕ್ರಾಂತ್​ ರೋಣ’ ಬಳಿಕ ಸುದೀಪ್​ ಅವರ ಬೇರೆ ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ. ದೀರ್ಘ ಗ್ಯಾಪ್​ ಆಗಿರುವ ಕಾರಣದಿಂದ ‘ಮ್ಯಾಕ್ಸ್​’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಕಾತರ ಹೆಚ್ಚಾಗಿದೆ.