ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗ್ತಿದ್ದು, ಭಾರೀ ಮಳೆಗೆ ಹೇಮಾವತಿ, ತುಂಗಾ ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಭದ್ರಾ ನದಿ ಅಬ್ಬರಕ್ಕೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಕೊಪ್ಪ, ಕಳಸ, ಮೂಡಿಗೆರೆ, N.R ಪುರ, ಚಿಕ್ಕಮಗಳೂರು ತಾಲೂಕಿನಾದ್ಯಂತ ಮಳೆ ಮುಂದುವರಿದಿದೆ. ಭಾರೀ ಮಳೆಯಿಂದ ಹೇಮಾವತಿ, ತುಂಗಾ, ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.