PM Modi: ನಾಳೆ ಮುದ್ದೇನಹಳ್ಳಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ನಿರ್ಬಂಧವು ಇಂದು ಬೆಳಗ್ಗೆ 10 ಗಂಟೆಯಿಂದ ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಇರುತ್ತದೆ. ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಭದ್ರತಾ ದಳದವರ ಓಡಾಟ ಸರಾಗವಾಗಿರಲಿ ಎಂಬ ಉದ್ದೇಶದಿಂದ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.