ಲಕ್ನೋ ಸೂಪರ್ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 60 ರನ್ಗಳ ಇನ್ನಿಂಗ್ಸ್ ಆಡಿದ ಗುಜರಾತ್ ಟೈಟನ್ಸ್ ನಾಯಕ ಶುಭ್ಮನ್ ಗಿಲ್ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಈ ಅರ್ಧಶತಕದ ಇನ್ನಿಂಗ್ಸ್ನೊಂದಿಗೆ ಗಿಲ್, ಗುಜರಾತ್ ಟೈಟಾನ್ಸ್ ಪರ ಐಪಿಎಲ್‌ನಲ್ಲಿ 2000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. 2024 ರ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಗುಜರಾತ್ ತಂಡದ ನಾಯಕತ್ವವಹಿಸಿಕೊಂಡಿದ್ದ ಗಿಲ್ ಆ ಸೀಸನ್‌ನಲ್ಲಿ ಆಡಿದ್ದ 12 ಪಂದ್ಯಗಳಲ್ಲಿ ಒಟ್ಟು 426 ರನ್ ಗಳಿಸಿದರು. ಆದಾಗ್ಯೂ ತಂಡವನ್ನು ಪ್ಲೇಆಫ್‌ಗೆ ಕೊಂಡೊಯ್ಯಲು ಸಾಧ್ಯವಾಗಿರಲಿಲ್ಲ.