ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ತಾಲೂಕು ಆಡಳಿತದ ಧ್ವಜಾರೋಹಣ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿತ್ತು. ಚಂದ್ರಶೇಖರ ಭಾರತಿ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು. ಇದರಲ್ಲಿ ಮಕ್ಕಳು ನವಿಲು, ಕಮಲದ ಹೂ ಹಿಡಿದು ನೃತ್ಯ ಮಾಡಿದ್ದರು. ರಾಷ್ಟ್ರ ಹೂವನ್ನು ರಾಜಕೀಯವಾಗಿ ನೋಡಿದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.