ಅಂಕೋಲಾ ಬಳಿ ಗುಡ್ಡ ಕುಸಿತ, 9 ಜನ ಮಣ್ಣಲ್ಲಿ ಸಿಲುಕಿರುವ ಶಂಕೆ
ಶಿರೂರು ಬಳಿ ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ಬಂದ್ ಆಗಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ಮಣ್ಣಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯಚರಣೆಯನ್ನು ಜಿಲ್ಲಾಡಳಿತ ಆರಂಭಿಸಿದೆ. ಜೆಸಿಬಿಗಳ ಮೂಲಕ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ.