ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ ಅವರು ಉತ್ತರ ಭಾರತದವರು. ಅವರು ವೃತ್ತಿಬದುಕು ಕಟ್ಟಿಕೊಂಡಿದ್ದು ಕರ್ನಾಟಕದಲ್ಲಿ. ಕನ್ನಡ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಹೆಚ್ಚು ಜನಪ್ರಿಯತೆ ಪಡೆದುಕೊಂಡರು. ಕರುನಾಡಿನಿಂದ ಅವರಿಗೆ ಹಣ, ಹೆಸರು ಎಲ್ಲವೂ ಸಿಕ್ಕಿದೆ. ಆ ಪ್ರೀತಿಗಾಗಿ ಅವರು ಕನ್ನಡ ಕಲಿತಿದ್ದಾರೆ. ‘ಕನಸಿನ ಕರುನಾಡು ಟಿವಿ9 ಸಮ್ಮಿಟ್ 2023’ ಕಾರ್ಯಕ್ರಮದಲ್ಲಿ ಶಾನ್ವಿ ಶ್ರೀವಾಸ್ತವ ಭಾಗಿ ಆಗಿದ್ದಾರೆ. ರಾಜ್ ಬಿ. ಶೆಟ್ಟಿ ಜೊತೆ ಅವರು ವೇದಿಕೆ ಹಂಚಿಕೊಂಡಿದ್ದಾರೆ. ಈ ವೇಳೆ ಅವರು ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ. ತಾವು ಕನ್ನಡ ಕಲಿತಿದ್ದು ಯಾಕೆ ಎಂಬುದನ್ನು ಅವರು ವಿವರಿಸಿದ್ದಾರೆ. ರಕ್ಷಿತ್ ಶೆಟ್ಟಿ, ಯಶ್, ಗಣೇಶ್, ದರ್ಶನ್ ಮುಂತಾದ ಸ್ಟಾರ್ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ.