ಅಪ್ಪನ ಕೈಯಿಂದಲೇ ಅಧಿಕಾರಿ ಸ್ವೀಕರಿಸಿದ ಮಗಳು; ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಭಾವನಾತ್ಮಕ ಘಟನೆ

ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ‌.ಎಸ್.ವೆಂಕಟೇಶ್ ಅವರು ಎಸ್ಪಿ ಕಚೇರಿಗೆ ವರ್ಗಾವಣೆಯಾಗಿದ್ದು ತಮ್ಮ ಮಗಳೂ ಆದ ನೂತನ ಎಸ್‌ಐ ಬಿ.ವಿ.ವರ್ಷಾ ಅವರಿಗೆ ಜೂನ್ 20ರ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ರು. ಈ ಮೂಲಕ ಠಾಣೆಯ ಸಿಬ್ಬಂದಿ ಭಾವನಾತ್ಮಕ ಸನ್ನಿವೇಶಕ್ಕೆ ಸಾಕ್ಷಿಯಾದ್ರು. ಈ ವೇಳೆ ಸಿಬ್ಬಂದಿ ಮತ್ತು ಅಲ್ಲಿಗೆ ಆಗಮಿಸಿದ್ದ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.