ಮನೆ ಧ್ವಂಸ, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ವೃದ್ಧ ದಂಪತಿ
ಮಂಗಳೂರಿನ ಬಳಿ ಕಡಬ ತಾಲೂಕಿನಲ್ಲಿ ವಾಸಿಸುತ್ತಿದ್ದ ವೃದ್ಧ ದಂಪತಿಯ ಮನೆಯನ್ನು ಅಧಿಕಾರಿಗಳು ಧ್ವಂಸ ಮಾಡಿದ್ದಾರೆ. ಈ ಘಟನೆಯಿಂದಾಗಿ ದಂಪತಿಗಳು ತೀವ್ರ ಆಘಾತಕ್ಕೀಡಾಗಿದ್ದಾರೆ. ಭೂಮಿ ವಿವಾದದಿಂದಾಗಿ ಮನೆ ಕಳೆದುಕೊಂಡಿರುವ ದಂಪತಿಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮತಿ ಕೋರಿದ್ದಾರೆ.