ಬೇಸಿಗೆ ಆರಂಭಕ್ಕೂ ಮೊದಲೇ ಕೋಣನೂರು, ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತ

ಬೇಸಿಗೆ ಆರಂಭಕ್ಕೂ ಮೊದಲೇ ಅರಣ್ಯದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಮತ್ತು ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು ಅರಣ್ಯ ಪ್ರದೇಶದ ಒಂದಷ್ಟು ಭಾಗ ಸುಟ್ಟು ಹೋಗಿದೆ. ಬೆಂಕಿಯಿಂದ ನೂರಾರು ಎಕರೆ ಪ್ರದೇಶ ಭಸ್ಮವಾಗಿದೆ.