ಗದಗ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಸಹ ಮೊಹರಂ ಹಬ್ಬವನ್ನು ಹಿಂದು-ಮುಸ್ಲಿಂ ಒಟ್ಟಿಗೆ ಆಚರಿಸುವ ಮೂಲಕ ಭಾವೈಕ್ಯತೆ ಸಾರಿದ್ದಾರೆ. ಅಲೆ ದೇವರ ಮೆರವಣಿಗೆಯಲ್ಲಿ ಹೆಜ್ಜೆ ಮಜಲು, ಕೋಲಾಟ ಆಡುತ್ತಾ ಸಾವಿರಾರು ಜನರು ಭಾಗಿಯಾಗಿದ್ದಾರೆ.