ವಿಡಿಯೋ ಪ್ರಕರಣ ದೇವೇಗೌಡರನ್ನು ಘಾಸಿಗೊಳಿಸಿದೆಯೇ?

ಪ್ರಜ್ವಲ್ ರೇವಣ್ಣ ಪ್ರಕರಣ ಜೆಡಿಎಸ್ ಪಕ್ಷಕ್ಕೆ ಹಿನ್ನಡೆ ತಂದಿದೆ. ಜೆಡಿಎಸ್ ಮುಖ್ಯಸ್ಥ ಎಚ್ ಡಿ ದೇವೇಗೌಡ ಅವರನ್ನು ಮಾನಸಿಕವಾಗಿ ಕುಗ್ಗಿಸಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಶ್ರವಣಬೆಳಗೊಳ ಜೆಡಿಎಸ್ ಶಾಸಕ ಸಿಎನ್ ಬಾಲಕೃಷ್ಣ, ತಾವು ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದೇವೆ ಎಂದಿದ್ದಾರೆ. ಗೌಡರು ಮಾನಸಿಕವಾಗಿ ನೊಂದಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ತಾವು ಯೋಚಿಸಬೇಡಿ ಎಂದು ಧೈರ್ಯ ಹೇಳಿದ್ದಾಗಿ ತಿಳಿಸಿದ್ದಾರೆ.