ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂ. ನೀಡುವ ‘ಮಹಾಲಕ್ಷ್ಮಿ’ ಯೋಜನೆ ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ ಮತ್ತು ಆ ಬಗ್ಗೆ ಪಕ್ಷದ ನಾಯಕ ರಾಹುಲ್ ಗಾಂಧಿ ಬಹಿರಂಗ ಹೇಳಿಕೆ ನೀಡಿದ್ದರ ಪರಿಣಾಮ ಈಗ ಬೆಂಗಳೂರಿನಲ್ಲಿ ಕಾಣಿಸಲಾರಂಭವಾಗಿದೆ. ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಗೆ ಖಾತೆ ತೆರೆಯುವುದಕ್ಕಾಗಿ ಕಳೆದ ಎರಡು ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುತ್ತಿದ್ದಾರೆ.