ನಟ ಪ್ರಜ್ವಲ್ ದೇವರಾಜ್ ಅವರು ಜುಲೈ 4ರಂದು ಅದ್ದೂರಿಯಾಗಿ ಬರ್ತ್ಡೇ ಆಚರಿಸಿಕೊಂಡಿದ್ದಾರೆ. ಕೊರೊನಾ, ಪುನೀತ್ ರಾಜ್ಕುಮಾರ್ ನಿಧನ ಮತ್ತಿತ್ಯಾದಿ ಕಾರಣಗಳಿಂದ ಕಳೆದ ಕೆಲ ವರ್ಷಗಳಲ್ಲಿ ಅವರಿಗೆ ಅಭಿಮಾನಿಗಳ ಜೊತೆ ಬರ್ತ್ಡೇ ಆಚರಿಸಿಕೊಳ್ಳೋಕೆ ಸಾಧ್ಯವಾಗಿರಲಿಲ್ಲ. ಈಗ ಅವರು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೇಕ್ ಕತ್ತರಿಸಿ ಅವರು ಸಂಭ್ರಮಿಸಿದ್ದಾರೆ. ಪ್ರಜ್ವಲ್ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ಹಾಗೂ ಟೀಸರ್ ಕೂಡ ರಿಲೀಸ್ ಆಗಿದ್ದು, ಅಭಿಮಾನಿಗಳ ಖುಷಿ ಹೆಚ್ಚಿಸಿದೆ.